ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅರ್ಷದ್ ಸರವು
ಬಿ.ಸಿ.ರೋಡ್ : ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಅರ್ಶದ್ ಸರವು ನೇಮಕಗೊಂಡಿದ್ದಾರೆ.
ಮಾಜಿ ಸಚಿವ ಬಿ. ರಮಾನಾಥ ರೈ ಅವರ ನಿರ್ದೇಶನದಂತೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅವರ ಶಿಫಾರಸ್ಸಿನಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ ಕೆ ಶಾಹುಲ್ ಹಮೀದ್ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಂಗಳೂರಿನ ಮಲ್ಲಿಕ್ಕಟ್ಟೆ ಕಾಂಗ್ರೆಸ್ ಭವನದಲ್ಲಿ ಪಕ್ಷದ ಪ್ರಮುಖ ನಾಯಕರ ಸಮ್ಮುಖದಲ್ಲಿ ನೇಮಕಾತಿ ಆದೇಶ ಪತ್ರ ಸ್ವೀಕರಿಸಿದರು. ಕೊಳ್ನಾಡು ಗ್ರಾಮದ ಕೋಡಪದವು ಸರವು ನಿವಾಸಿಯಾಗಿರುವ ಅರ್ಶದ್ ಪದವೀಧರರಾಗಿದ್ದು ಕೊಳ್ನಾಡು ಗ್ರಾಮ ಪಂಚಾಯತ್ ಚುನಾವಣೆ ಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. ಅವರು ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.
Next Story