ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ಮುಖಂಡರು
ಮಂಗಳೂರು, ಜು. 24: ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ಎಂ.ಆರ್. ಸೀತಾರಾಂ, ಮಾಜಿ ಮುಖ್ಯ ಸಚೇತಕ ಪಿ.ಎಂ. ಅಶೋಕ ಪಠಾಣ್ ಶನಿವಾರ ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದರು.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫೆರ್ನಾಂಡೀಸ್ರ ಆರೋಗ್ಯದ ಬಗ್ಗೆ ಆಸ್ಕರ್ರ ಪತ್ನಿ ಬ್ಲೋಸಂ ಡಿಸೋಜ ಹಾಗೂ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಚರ್ಚಿಸಿದರು.
ಈ ಸಂದರ್ಭ ಮಾಜಿ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್, ಪ್ರಕಾಶ್ ಚಂದ್ರ ಶೆಟ್ಟಿ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಕವಿತಾ ಸನಿಲ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ತೇಜಸ್ವಿರಾಜ್, ಯುವ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಇಂಟೆಕ್ ಅಧ್ಯಕ್ಷ ಪುನೀತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Next Story