ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ
ಉಡುಪಿ, ಆ.5: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟಂತೆ ಫಲಾನುಭವಿಗಳಿಗೆ ಮತ್ತು ಸಾರ್ವಜನಿಕರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಮತ್ತು ಕುಂದುಕೊರತೆಗಳನ್ನು ಬಗೆಹರಿಸಲು, ಸಹಾುವಾಣಿ ಕೇಂದ್ರವನ್ನು ತೆರೆಯಲಾಗಿದೆ.
ವಾರದ ಎಲ್ಲಾ ದಿನಗಳಲ್ಲೂ ದಿನದ 24 ಗಂಟೆಯೂ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ: 8277799990ಗೆ ಕರೆ ಮಾಡಿ ಕೇಂದ್ರದ ಮೂಲಕ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
Next Story