ದ.ಕ. ಜಿಲ್ಲೆಯಲ್ಲಿ ಶನಿವಾರ ಕೋವಿಡ್ಗೆ ನಾಲ್ವರು ಬಲಿ; 342 ಮಂದಿಗೆ ಸೋಂಕು ದೃಢ
ಸಾಂದರ್ಭಿಕ ಚಿತ್ರ(PTI)
ಮಂಗಳೂರು, ಆ.7: ದ.ಕ. ಜಿಲ್ಲೆಯಲ್ಲಿ ಕೋವಿಡ್ಗೆ ನಾಲ್ವರು ಬಲಿಯಾಗಿದ್ದು, ಶನಿವಾರ ಹೊಸದಾಗಿ 342 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ.
ಪಾಸಿಟಿವಿಟಿ ದರ ಶೇ. 3.79 ದಾಖಲಾಗಿದ್ದು, ಜಿಲ್ಲೆಯಲ್ಲಿ 286 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,02,746 ಪಾಸಿಟಿವ್ ಪ್ರಕರಣಗಳಿದ್ದು, ಈ ಪೈಕಿ 97,992 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ 1,460 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 3,294 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ 83,295 ಮಾಸ್ಕ್ ಉಲ್ಲಂಘನೆ ಪ್ರಕರಣ ಪತ್ತೆಯಾಗಿದ್ದು, 1,01,12,217 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story