ಲಾರಿಯಡಿಗೆ ಬಿದ್ದು ಯುವಕ ಮೃತ್ಯು
ಮಲ್ಪೆ, ಆ.16: ಚಲಿಸುತ್ತಿದ್ದ ಲಾರಿಯಡಿಗೆ ಬಿದ್ದು ಸುಮಾರು 30-35 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ಆ.16 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ.
ರಸ್ತೆಯಲ್ಲಿ ಓಡಾಡುತ್ತಿದ್ದ ವ್ಯಕ್ತಿ ಉಡುಪಿ ಕಡೆಯಿಂದ ಮಲ್ಪೆಬಂದರು ಕಡೆಗೆ ಹೋಗುತ್ತಿದ್ದ ಲಾರಿಯ ಅಡಿಗೆ ಓಡಿ ಹೋಗಿದ್ದು, ಇದರಿಂದ ಅವರು ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರು ಮಾನಸಿಕ ಅಸ್ವಸ್ಥನಂತೆ ವರ್ತಿಸುತಿದ್ದರೆನ್ನಲಾಗಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story