ಆ.24: ಉಡುಪಿಯಲ್ಲಿ ಕೊರೋನ ಲಸಿಕೆ ಲಭ್ಯತೆ ವಿವರ
ಸಾಂದರ್ಭಿಕ ಚಿತ್ರ
ಉಡುಪಿ, ಆ.23: ಉಡುಪಿ ಜಿಲ್ಲೆಯಲ್ಲಿ ಆ.24ರ ಮಂಗಳವಾರದಂದು ಮೊದಲ ಮತ್ತು ಎರಡನೇ ಡೋಸ್ ಕೋವಿಡ್ ಲಸಿಕೆ ಲಭ್ಯವಿದ್ದು, ವಿವರ ಈ ಕೆಳಕಂಡಂತಿದೆ.
ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಸೇಂಟ್ ಸಿಸಿಲಿ ಶಾಲಾ ಲಸಿಕಾ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್ ಒಟ್ಟು -100, ನಗರದ ಅಲಂಕಾರ್ ಥಿಯೇಟರ್ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಶೀಲ್ಡ್ 2ನೇ ಡೋಸ್-100, ಎಫ್ಪಿಎಐ ಕುಕ್ಕಿಕಟ್ಟೆಯ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ 2ನೇ ಡೋಸ್-130, ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್ಎಸ್) ಆಸ್ಪತ್ರೆಯಲ್ಲಿ ಸೆ.30ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 100 ಡೋಸ್ ಲಭ್ಯವಿದೆ. ಸಮಯ ಬೆಳಗ್ಗೆ 10:00ರಿಂದ ಅಪರಾಹ್ನ 1:00ರವರೆಗೆ.
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಡಿಎಚ್ಓ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.