ಮಂಗಳೂರು: ಕಟ್ಟಡದಲ್ಲಿ ಅಪರಿಚಿತ ಮೃತದೇಹ ಪತ್ತೆ
ಮಂಗಳೂರು, ಆ.24: ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಸಮೀಪದ ಸ್ಟಾರ್ ಟವರ್ ಕಟ್ಟಡದಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದೆ.
ಮಂಗಳವಾರ ಬೆಳಗ್ಗೆ 9 ಗಂಟೆಗೆ ಕಟ್ಟಡದ ನೆಲಮಹಡಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ದೇಹದ ಕೆಲಭಾಗ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ವ್ಯಕ್ತಿ ಎರಡು ದಿನಗಳ ಹಿಂದೆ ಸ್ಟಾರ್ ಟವರ್ ಕಟ್ಟಡದ ನೆಲ ಅಂತಸ್ತಿನ ಖಾಲಿ ಜಾಗಕ್ಕೆ ಆಗಮಿಸಿದ್ದರು ಎನ್ನಲಾಗಿದೆ.
ಈ ವ್ಯಕ್ತಿಯ ಸಾವಿನ ಬಗ್ಗೆ ಅನುಮಾನವಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಿಚಿತ ವ್ಯಕ್ತಿಯ ಮಾಹಿತಿ ಇದ್ದವರು ಬಂದರು ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಂಗಳೂರು ಉತ್ತರ (ಬಂದರ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story