ಎಸ್ ಡಿಪಿಐ ವಿಟ್ಲ ಪಡ್ನೂರು ವಲಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ
ಹೈದರ್ ಅಲಿ ಕಡಂಬು ಸಲೀಂ ಪರ್ತಿಪ್ಪಾಡಿ
ವಿಟ್ಲ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವಿಟ್ಲ ಪಡ್ನೂರು ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪರ್ತಿಪ್ಪಾಡಿಯ ವಲಯ ಸಮಿತಿ ಕಚೇರಿಯಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಹೈದರ್ ಅಲಿ ಕಡಂಬು, ಉಪಾಧ್ಯಕ್ಷರಾಗಿ ಅಝೀಝ್ ಕಡಂಬು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಪರ್ತಿಪ್ಪಾಡಿ ಇವರನ್ನು ಆಯ್ಕೆ ಮಾಡಲಾಯಿತು.
ಸಮಿತಿಯ ಜೊತೆ ಕಾರ್ಯದರ್ಶಿ ಮಹಮೂದ್ ಕಡಂಬು, ಕೋಶಾಧಿಕಾರಿ ಅಲಿ ಪರ್ತಿಪ್ಪಾಡಿ ಇವರನ್ನು ಆಯ್ಕೆಮಾಡಲಾಯಿತು. ಎಸ್ ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಧರ್ಶಿ ಖಲಂದರ್ ಪರ್ತಿಪ್ಪಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ಸದಸ್ಯ ಶಾಕಿರ್ ಅಳಕೆಮಜಲು, ಪದಾಧಿಕಾರಿಗಳ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
Next Story