ಬಸ್ ಢಿಕ್ಕಿ : ಪಾದಚಾರಿ ಮೃತ್ಯು
ಪಡುಬಿದ್ರೆ : ಮಂಗಳೂರು ಕಡೆ ಸಂಚರಿಸುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಢಿಕ್ಕಿಯಾಗಿ ಹೆದ್ದಾರಿ ದಾಟುತ್ತಿದ್ದ ಪಡುಬಿದ್ರಿ ಬೇಂಗ್ರೆ ನಿವಾಸಿ ಆನಂದ ದೇವಾಡಿಗ (62) ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಅಪಘಾತದಿಂದ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಈ ವೇಳೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story