ಕೆಸಿ ರೋಡ್: ಬೈಕ್ ಪಲ್ಟಿಯಾಗಿ ಮಹಿಳೆ ಮೃತ್ಯು
ಉಳ್ಳಾಲ : ಬೈಕ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೆಸಿ ರೋಡ್ ಸಮೀಪದ ಪಂಜಳ ಬಳಿ ಗುರುವಾರ ತಡರಾತ್ರಿ ನಡೆದಿದೆ.
ಮೃತರನ್ನು ಮಂಜೇಶ್ವರ ತುಮಿನಾಡು ನಿವಾಸಿ ಜಮೀಳ (40) ಎಂದು ಗುರುತಿಸಲಾಗಿದೆ.
ಅವರು ಕೆಸಿರೋಡ್ ನಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದು, ರಾತ್ರಿ ವೇಳೆ ಮನೆಗೆ ವಾಪಸ್ ಹೋಗುವ ಸಂದರ್ಭ ಬೈಕ್ ಪಲ್ಟಿಯಾಗಿ ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story