ಸೆ.17ಕ್ಕೆ ಅಂತ್ಯೋದಯ ಸಿರಿ ಧಾನ್ಯ ಉತ್ಸವ
ಉಡುಪಿ, ಸೆ.15: ಅಂತಾರಾಷ್ಟ್ರೀಯ ಸಿರಿ ಧಾನ್ಯ ಉತ್ಸವ ಆಚರಣೆ ಸೆ.17ರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಉದ್ಘಾಟಿಸಲಿದ್ದು, ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರ ದಲ್ಲಿ ಅಂತರ್ಜಾಲದ ಮುಖಾಂತರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಿರಿಧಾನ್ಯ ಬಳಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ಕುರಿತಾಗಿ ವಸ್ತು ಪ್ರದರ್ಶನ ಏರ್ಪಡಿಸಲಾಗುವುದು ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರ ಪ್ರಕಟಣೆ ತಿಳಿಸಿದೆ.
Next Story