ಬುಡೋಳಿ: ಖಾಸಗಿ ಬಸ್-ಕಂಟೈನರ್ ಲಾರಿ ನಡುವೆ ಅಪಘಾತ
ಪರಾರಿಯಾಗಲೆತ್ನಿಸಿದ ಲಾರಿ ಚಾಲಕನನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು
ಬಂಟ್ವಾಳ, ಸೆ.16: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಖಾಸಗಿ ಬಸ್ ಮತ್ತು ಕಂಟೈನರ್ ಲಾರಿಯ ನಡುವೆ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ನಡುವೆ ಬುಡೋಳಿಯ ಬೊಳ್ಳುಕಲ್ಲು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಸರಿದು ನಿಂತಿದೆ.
ಅಪಘಾತದ ಬಳಿಕ ಲಾರಿ ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯ ಯುವಕರ ತಂಡ ಲಾರಿಯನ್ನು ಸುಮಾರು 5 ಕಿ.ಮೀ. ದೂರದ ವರೆಗೆ ಬೆನ್ನಟ್ಟಿದ ತಡೆದು ನಿಲ್ಲಿಸಿ ಅದರ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story