ಮಂಗಳೂರು ವಿಮಾನ ನಿಲ್ದಾಣದಲ್ಲಿ 41.33 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು: ವಿಮಾನದ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಯಾಣಿಕನೋರ್ವನನ್ನು ವಶಕ್ಕೆ ಪಡೆದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 41.33 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕನೋರ್ವನನ್ನು ತಪಾಸಣೆಗೊಳಪಡಿಸಿದಾಗ ಅಕ್ರಮ ಚಿನ್ನ ಸಾಗಾಟ ಬಯಲಾಗಿದೆ. ಈತ ಅನುಮಾನ ಬಾರದಂತೆ ಚಿನ್ನವನ್ನು ಪ್ಯಾಕ್ ಮಾಡಿ ಸಾಗಾಟ ಮಾಡಲು ಯತ್ನಿಸಿದ್ದು, ಆದರೆ ತಪಾಸಣೆ ವೇಳೆ ಅಕ್ರಮ ಸಾಗಾಟ ಬಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story