ಸೆ.18: ಉಡುಪಿ ಜಿಲ್ಲಾ ಕಾಂಗ್ರೆಸ್ನಿಂದ ಆಸ್ಕರ್ಗೆ ಶ್ರದ್ಧಾಂಜಲಿ ಸಭೆ
ಉಡುಪಿ, ಸೆ.16: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೆ.18ರ ಶನಿವಾರ ಬೆಳಗ್ಗೆ 10 ಗಂಟೆಗೆ ಇತ್ತೀಚೆಗೆ ನಿಧನರಾದ ಧೀಮಂತ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಣಾ ಸಭೆ ಯನ್ನು ಆಯೋಜಿಸಲಾಗಿದೆ.
ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹಾಗೂ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಯು.ಆರ್.ಸಭಾಪತಿ ಮೊದಲಾದ ನಾಯಕರು ಭಾಗವಹಿಸಲಿದ್ದಾರೆ.
ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story