ದ.ಕ. ಜಿಲ್ಲೆ : ಕೋವಿಡ್ಗೆ 2 ಬಲಿ, 124 ಮಂದಿಗೆ ಕೊರೋನ ಸೋಂಕು
ಮಂಗಳೂರು, ಸೆ.17: ದ.ಕ. ಜಿಲ್ಲೆಯಲ್ಲಿ ಶುಕ್ರವಾರ 124 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲೆಯ ಪಾಸಿಟಿವಿಟಿ ದರ ಶೇ.1.15ರಷ್ಟಿದೆ. ಜಿಲ್ಲೆಯಲ್ಲಿ ಈವರೆಗೆ 17,31,091 ಮಂದಿಯನ್ನು ಕೋವಿಡ್ ತಪಾಸಣೆಗೊಳಪಡಿಸಲಾಗಿದೆ. ಆ ಪೈಕಿ 16,18,131 ಮಂದಿಯ ವರದಿ ನೆಗೆಟಿವ್ ಆಗಿದ್ದು, 1,12,960 ಮಂದಿಯ ವರದಿ ಪಾಸಿಟಿವ್ ಆಗಿದೆ.
ಶುಕ್ರವಾರ 245 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 1,10,025ಕ್ಕೇರಿದೆ. ಈವರೆಗೆ ಮೃತಪಟ್ಟವರ ಸಂಖ್ಯೆ 1,628ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 1307 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿ ಈವರೆಗೆ 87,238 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ 1,06,16,470 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story