ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಉಡುಪಿ, ಸೆ.18: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕೊರಂಗ್ರಪಾಡಿ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ನಿವಾಸಿ ಕರುಣಾಕರ ಶೆಟ್ಟಿ ಎಂಬವರ ಪತ್ನಿ ಚಂದ್ರಕಲಾ ಶೆಟ್ಟಿ(45) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.18ರಂದು ಮಧ್ಯಾಹ್ನ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story