ಮಂಗಳೂರು ಏರ್ಪೋರ್ಟ್ನಲ್ಲಿ ಚಿನ್ನ ಅಕ್ರಮ ಸಾಗಾಟ ಯತ್ನ: ಆರೋಪಿ ಸಹಿತ ಸೊತ್ತು ವಶ
ಮಂಗಳೂರು, ಸೆ. 20: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಚಿನ್ನ ಅಕ್ರಮ ಸಾಗಾಟ ಪ್ರಕರಣ ಪತ್ತೆಯಾಗಿದೆ.
ದುಬೈಯಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಮೂಲಕ ಆಗಮಿಸಿದ ಕಾಸರಗೋಡಿನ ಪ್ರಯಾಣಿಕನೋರ್ವವನ್ನು ವಶಕ್ಕೆ ಪಡೆದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನಿಂದ 418 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಮೂರು ದಿನಗಳ ಅಂತರದಲ್ಲಿ ತೆರಿಗೆ ವಂಚಿಸಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 70 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.
Next Story