ಅಲ್ಪಸಂಖ್ಯಾತ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ, ಸೆ.20: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸರಕಾರಿ, ಅನುದಾನಿತ ಹಾಗೂ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ, ಪದವಿ, ಸ್ನಾತಕೋತ್ತರ ಮತ್ತು ಪಿಹೆಚ್ಡಿಯವರೆಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಹಾಗೂ ತಾಂತ್ರಿಕ, ವಿವಿಧ ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಸೂಕ್ತ ದಾಖಲಾತಿಯೊಂದಿಗೆ ಆನ್ಲೈನ್ನಲ್ಲಿ https://scholarships.gov.in ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in/udupi/public ಅಥವಾ ದೂ.ಸಂ: 8277799990ನ್ನು ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದೆ.
Next Story