ದ.ಕ. ಜಿಲ್ಲೆ : ಕೋವಿಡ್ಗೆ ಇಬ್ಬರು ಬಲಿ; 114 ಮಂದಿಗೆ ಕೊರೋನ ಸೋಂಕು
ಮಂಗಳೂರು, ಸೆ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 114 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.
134 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.1.33ರಷ್ಟಿದೆ.ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,13,406ಕ್ಕೆ ಏರಿಕೆಯಾಗಿದೆ, ಅವರಲ್ಲಿ ಈಗಾಗಲೇ 1,10,628 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1143 ಮಂದಿ ಚಿಕಿತ್ಸೆ ಪಡೆಯುತ್ತಿ ದ್ದಾರೆ. ಇದುವರೆಗೆ ಒಟ್ಟು 1635 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story