ದ.ಕ.: ಕೋವಿಡ್ಗೆ ಐವರು ಬಲಿ; 108 ಮಂದಿಗೆ ಸೋಂಕು
ಮಂಗಳೂರು, ಸೆ.22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಐವರು ಸಾವಿಗೀಡಾಗಿದ್ದಾರೆ. 121 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.1.01ರಷ್ಟಿದೆ.
ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,13,514ಕ್ಕೆ ಏರಿಕೆಯಾಗಿದೆ, ಅವರಲ್ಲಿ ಈಗಾಗಲೇ 1,10,749 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1125 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಒಟ್ಟು 1640 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story