ಕೋವಿಡ್ ಲಸಿಕೆ ನೀಡಿಕೆ: ಉಡುಪಿ ಜಿಲ್ಲೆ ಮುಂಚೂಣಿಯಲ್ಲಿ | Vartha Bharati- ವಾರ್ತಾ ಭಾರತಿ

--

ಕೋವಿಡ್ ಲಸಿಕೆ ನೀಡಿಕೆ: ಉಡುಪಿ ಜಿಲ್ಲೆ ಮುಂಚೂಣಿಯಲ್ಲಿ

ಸಾಂದರ್ಭಿಕ ಚಿತ್ರ

ಉಡುಪಿ, ಸೆ.23: ಬುಧವಾರ ಜಿಲ್ಲೆಯಲ್ಲಿ ಇಂದು ನಡೆದ ಮೆಗಾ ಲಸಿಕಾ ಮೇಳದಲ್ಲಿ ಅರ್ಹ 18 ವರ್ಷ ಮೇಲ್ಪಟ್ಟ ಒಟ್ಟು 23,589 ಮಂದಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ. ಈ ಮೂಲಕ ಉಡುಪಿ ಜಿಲ್ಲೆಯಲ್ಲಿ ಒಟ್ಟು 8,93,460 ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದು, ಶೇ.89.1ರಷ್ಟು ಮಂದಿ ಲಸಿಕೆಯನ್ನು ಪಡೆದಂತಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ.ತಿಳಿಸಿದ್ದಾರೆ.

ಅಲ್ಲದೇ ಒಟ್ಟು 4,02,697 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದು, ಶೇ.40.2 ಲಸಿಕಾಕರಣವಾಗಿದೆ. ಇದರಿಂದ ಉಡುಪಿ ಜಿಲ್ಲೆಯು ಲಸಿಕಾಕರಣದಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ ಎಂದು ಅವರು ಹೇಳಿದ್ದಾರೆ. ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿರುವ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಶೇ.100ರಷ್ಟು ಲಸಿಕಾಕರಣವಾಗುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗ ಬೇಕು ಎಂದು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

ಗುರುವಾರದ ಸಾಧನೆ: ಗುರುವಾರ ಜಿಲ್ಲೆಯಲ್ಲಿ ಒಟ್ಟು 3028 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 1103 ಮಂದಿ ಮೊದಲ ಡೋಸ್ ಹಾಗೂ 1925 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 625 ಮಂದಿ ಮೊದಲ ಡೋಸ್ ಹಾಗೂ 1430 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 478 ಮಂದಿ ಮೊದಲ ಡೋಸ್ ಹಾಗೂ 494 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರ ಲಸಿಕೆ ಲಭ್ಯತೆ ವಿವರ
ಉಡುಪಿ ಜಿಲ್ಲೆಯಲ್ಲಿ ಸೆ.24ರ ಶುಕ್ರವಾರ ಕೋವಿಡ್- 19 ಪ್ರಥಮ ಮತ್ತು ಎರಡನೇ ಡೋಸ್ ಲಸಿಕೆ ಲಭ್ಯವಿದೆ. ಗ್ರಾಮೀಣ ಪ್ರದೇಶಗಳಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು ಎರಡನೇ ಡೋಸ್ ಲಸಿಕೆ ಪಡೆಯಲು ಸಮೀಪದ ಸರಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆ ಬಗ್ಗೆ ವಿಚಾರಿಸಿ, ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಡಿಎಚ್‌ಓ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು ಎರಡನೇ ಡೋಸ್ ಲಸಿಕೆ ಲಭ್ಯವಿದೆ. ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್- 200, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವಕೃಪಾ ಶಾಲಾ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್-1000, ಕೋವ್ಯಾಕ್ಸಿನ್ ಎರಡನೇ ಡೋಸ್-500, ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-200 ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

ಅಕ್ಟೋಬರ್ 30ರೊಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನ ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top