ಕಡಬ: ಲೈಂಗಿಕ ಕಿರುಕುಳ ಆರೋಪ; ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸಾಲಯದ ಮಾಲಕ ಸಹಿತ ಮೂವರ ಬಂಧನ
ಕಡಬ, ಸೆ.25: ಇಲ್ಲಿನ ಕಳಾರ ಸಮೀಪ ಸ್ನೇಹಾ ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸಾಲಯ ಹೆಸರಿನಲ್ಲಿ ಕಾರ್ಯಾಚರಿಸುತ್ತಿರುವ ಮಸಾಜ್ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪಾರ್ಲರ್ ಮಾಲಕ ಸಹಿತ ಮೂವರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಚಿಕಿತ್ಸಾಲಯದ ಮಾಲಕ, ಕೇರಳ ಮೂಲದ ವಯನಾಡ್ ನಿವಾಸಿ ಅಬ್ರಹಾಂ, ಅನೀಶ್ ಹಾಗೂ 25 ವರ್ಷದ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಚಿಕಿತ್ಸಾಲಯದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ವಿರೋಧಿಸಿದ ಸಂದರ್ಭದಲ್ಲಿ ವೀಡಿಯೋ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಈ ಹಿಂದೆ ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಬ್ಬರು ಕಡಬ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
Next Story