ಮಂಗಳೂರು: ಸಂಚಾರ ಪೊಲೀಸರಿಗೆ ಬಾಡಿ ಕ್ಯಾಮರಾ ಅಳವಡಿಕೆ | Vartha Bharati- ವಾರ್ತಾ ಭಾರತಿ

--

ಅಹಿತಕರ ಘಟನೆಗಳ ಸತ್ಯಾಸತ್ಯತೆ ಅರಿಯಲು ಸಹಕಾರಿ

ಮಂಗಳೂರು: ಸಂಚಾರ ಪೊಲೀಸರಿಗೆ ಬಾಡಿ ಕ್ಯಾಮರಾ ಅಳವಡಿಕೆ

ಮಂಗಳೂರು, ಅ.11: ಸಾರ್ವಜನಿಕರ ಮೇಲೆ ಪೊಲೀಸರು ಹರಿ ಹಾಯ್ದು ಹೋಗುವುದು ಅಥವಾ ಪೊಲೀಸರ ಜೊತೆ ಸಾರ್ವಜನಿಕರು ಒರಟಾಗಿ ವರ್ತಿಸುವುದನ್ನು ತಪ್ಪಿಸುವ ಸಲುವಾಗಿ ಮಂಗಳೂರು ನಗರ ಸಂಚಾರ ಪೊಲೀಸರು 'ಬಾಡಿ ಕ್ಯಾಮರಾ' ಅಳವಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಹಿತಕರ ಘಟನೆಗಳ ಸಂದರ್ಭ ಸತ್ಯಾಸತ್ಯತೆಯನ್ನು ಅರಿಯಲು ಇದು ಸಹಕಾರಿ ಎಂದು ಹೇಳಲಾಗುತ್ತಿದೆ.

ವಾಹನಗಳ ತಪಾಸಣೆಯ ವೇಳೆ ಪೊಲೀಸರು ಮತ್ತು ಸಾರ್ವ ಜನಿಕರ ಮಧ್ಯೆ ಮಾತಿನ ಚಕಮಕಿ ನಡೆಯುವುದು ಸಾಮಾನ್ಯವಾಗಿದೆ. ಆವಾಗ 'ಬಾಡಿ ಕ್ಯಾಮರಾ' ಸೂಕ್ತ 'ರಕ್ಷಣೆ' ಒದಗಿಸಲಿದೆ ಎಂಬ ವಿಶ್ವಾಸದೊಂದಿಗೆ ಮಂಗಳೂರು ಸಂಚಾರ ಪೊಲೀಸರು 'ಬಾಡಿ ಕ್ಯಾಮರಾ' ಅಳವಡಿಸತೊಡಗಿದ್ದಾರೆ.

ಕೆಲವು ಸಂದರ್ಭ ಸಾರ್ವಜನಿಕರು ಅಥವಾ ಪೊಲೀಸರು ಆಕ್ರೋಶಭರಿತರಾಗುವುದು, ದರ್ಪ ತೋರುವುದು, ಒರಟಾಗಿ ವರ್ತಿಸುವುದು, ಮಾತಿನ ಚಕಮಕಿಗಿಳಿಯುವುದು, ಸಂಘರ್ಷದ ವಾತಾವರಣ ಸೃಷ್ಟಿಸುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭ 'ಬಾಡಿ ಕ್ಯಾಮರಾ' ಅಳವಡಿಸಿದರೆ ವಾಸ್ತವಾಂಶ ತಿಳಿಯಬಹುದಾಗಿದೆ. ಈಗಾಗಲೆ ಮಂಗಳೂರಿನ ಕೆಲವೇ ಪೊಲೀಸರ ಬಳಿ 'ಬಾಡಿ ಕ್ಯಾಮರಾ' ಇದ್ದು, ಇನ್ನಷ್ಟು ಪೊಲೀಸರಿಗೆ ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ.ಈ 'ಬಾಡಿ ಕ್ಯಾಮರಾ'ಗಳು ಧ್ವನಿ ಮತ್ತು ದೃಶ್ಯ ಎರಡನ್ನೂ ಚಿತ್ರೀಕರಿಸಿಕೊಳ್ಳುತ್ತವೆ. ಸಾರ್ವಜನಿಕರು ಅಥವಾ ಕರ್ತವ್ಯದಲ್ಲಿರುವ ಪೊಲೀಸರು ದುರ್ವರ್ತನೆ ತೋರಿದಾಗ 'ಬಾಡಿ ಕ್ಯಾಮರಾ'ದಲ್ಲಿ ದಾಖಲಾಗುವುದರಿಂದ ಅಗತ್ಯ ಬಿದ್ದಾಗ ಪರಿಶೀಲಿಸಬಹುದಾಗಿದೆ.ಹಾಗಾಗಿ ಯಾರೇ ತಪ್ಪು ಮಾಡಿದರು ಅದನ್ನು ಒಪ್ಪಿಕೊಳ್ಳಲೇ ಬೇಕಾಗುತ್ತದೆ. ಸಂಯಮದಿಂದ ವರ್ತಿಸುವಂತೆ ಸಂಚಾರ ಪೊಲೀಸರಿಗೂ ಸೂಚನೆ ನೀಡಲಾಗಿದೆ. ಸಾರ್ವಜನಿಕರ ಸಹಕಾರವೂ ಅಗತ್ಯವಿದೆ. ಕೆಲವೊಮ್ಮೆ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆಗಳಿರುವುದರಿಂದ 'ಬಾಡಿ ಕ್ಯಾಮರಾ'ಗಳನ್ನು ಬಳಸುವುದು ಅನಿವಾರ್ಯವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ವಾಹನಗಳ ತಪಾಸಣೆ, ಸಂಚಾರ ನಿಯಮಗಳನ್ನು ಉಲ್ಲಂಘಿ ಸುವುದು, ಟೋಯಿಂಗ್ ಸಂದರ್ಭ ಕೆಲವರು ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿದ ಘಟನೆಗಳಾಗಿದ್ದವು. ಇದು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಪ್ರಕ್ರಿಯೆಗಳಾಗಿರುತ್ತದೆ. ಈ ಮಧ್ಯೆ ಪೊಲೀಸರು ಸಂಯಮ ಕಳೆದುಕೊಂಡು ವರ್ತಿಸಿರುವ ಬಗ್ಗೆಯೂ ದೂರುಗಳು ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ 'ಬಾಡಿ ಕ್ಯಾಮರಾ' ಅಳವಡಿಕೆ ಅನಿವಾರ್ಯವಾಗಿದೆ.ಕೆಲವು ಪಾಯಿಂಟ್‌ಗಳಲ್ಲಿ ಒಬ್ಬೊಬ್ಬರೇ ಕೆಲಸ ಮಾಡು ವಾಗ ಮೊಬೈಲ್‌ನಿಂದ ರೆಕಾರ್ಡ್ ಮಾಡಿಕೊಳ್ಳುವುದು ಸಾಧ್ಯವಾಗುವುದಿಲ್ಲ. ಆವಾಗ 'ಬಾಡಿ ಕ್ಯಾಮರಾ' ತುಂಬಾ ಉಪಯೋಗಕ್ಕೆ ಬರುತ್ತದೆ. ಕರ್ತವ್ಯಕ್ಕೆ ಅಡ್ಡಿ ಪಡಿಸುವವರ ದೃಶ್ಯ ದಾಖಲಾಗುವುದರಿಂದ ನಮಗೆ ಸಾಕ್ಷಿ ದೊರೆಯುತ್ತದೆ ಎಂದು ಸಂಚಾರ ಪೊಲೀಸರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಸಂಚಾರ ವಿಭಾಗದ ಪ್ರತಿ ಪೊಲೀಸ್ ಠಾಣೆಗೆ 2ರಿಂದ 4 'ಬಾಡಿ ಕ್ಯಾಮರಾ' ನೀಡಲಾಗಿದೆ. ಈಗ ಪ್ರಮುಖ ಸ್ಥಳಗಳಲ್ಲಿ ಮಾತ್ರ ಇವುಗಳನ್ನು ಬಳಸಲಾಗುತ್ತಿದೆ. ವಾಹನಗಳ ಸಂಖ್ಯೆ, ತಪಾಸಣೆ ಹೆಚ್ಚುತ್ತಿರುವುದರಿಂದ 'ಬಾಡಿ ಕ್ಯಾಮರಾ'ಗಳ ಸಂಖ್ಯೆಯನ್ನು ಕೂಡ ಹೆಚ್ಚಿಸಬೇಕು ಎಂಬುದು ಸಂಚಾರ ಪೊಲೀಸರ ಬೇಡಿಕೆಯಾಗಿದೆ.

'ಬಾಡಿ ಕ್ಯಾಮರಾ'ಗಳ ಅಗತ್ಯದ ಬಗ್ಗೆ ಸರಕಾರ ಮತ್ತು ನ್ಯಾಯಾಲಯಗಳು ಕೂಡ ತಿಳಿಸಿವೆ. ನಗರದಲ್ಲಿ ಬಾಡಿ ಕ್ಯಾಮರಾಗಳ ಸಂಖ್ಯೆ ಹೆಚ್ಚೇನು ಇಲ್ಲ. ಸುರಕ್ಷತೆಯ ದೃಷ್ಟಿಯಿಂದ 'ಬಾಡಿ ಕ್ಯಾಮರಾ' ನೀಡಬೇಕು ಎಂಬ ಬೇಡಿಕೆ ಪೊಲೀಸರಿಂದ ಕೇಳಿ ಬಂದಿದೆ. ಇದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು.

 ಎಂ.ಎ.ನಟರಾಜ್,

ಎಸಿಪಿ, ಸಂಚಾರ ಉಪವಿಭಾಗ, ಮಂಗಳೂರು

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top