ಸಿಎಂ ಭೇಟಿ ಹಿನ್ನೆಲೆ: ಕುದ್ರೋಳಿ ಕ್ಷೇತ್ರಕ್ಕೆ ಅ.13ರಂದು ಸಂಜೆ 3-7ರವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ | Vartha Bharati- ವಾರ್ತಾ ಭಾರತಿ

--

ಬಿಗಿ ಬಂದೋಬಸ್ತ್

ಸಿಎಂ ಭೇಟಿ ಹಿನ್ನೆಲೆ: ಕುದ್ರೋಳಿ ಕ್ಷೇತ್ರಕ್ಕೆ ಅ.13ರಂದು ಸಂಜೆ 3-7ರವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಮಂಗಳೂರು, ಅ.12: ಸಿಎಂ ಬಸವರಾಜ ಬೊಮ್ಮಾಯಿಯವರು ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ಹಿನ್ನೆಲೆಯಲ್ಲಿ ಅ. 13ರಂದು ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಈ ಕಾರಣದಿಂದ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ಮಾತ್ರವಲ್ಲದೆ, ಅ. 13ರಂದು ಸಂಜೆ 3 ಗಂಟೆಯಿಂದ 7 ಗಂಟೆಯವರೆಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಮಂಗಳೂರು ನಗರ ಡಿಸಿಪಿ ಸಾರ್ವಜನಿಕರು ಹಾಗೂ ಭಕ್ತರು ಸಹಕರಿಸಬೇಕೆಂದು ಹೇಳಿದ್ದಾರೆ.

ಅಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಅವರು 11 ಗಂಟೆಗೆ ಉಡುಪಿಗೆ ತೆರಳಿ, ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಉಡುಪಿಯಿಂದ ಹೊರಟು 5 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವಕ್ಕೆ ಭೇಟಿ ನೀಡಲಿದ್ದಾರೆ.

ಈ ಸಂದರ್ಭ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕರು ಉಪಸ್ಥಿತರಿರುವರು. ಸಂಜೆ 6.55ಕ್ಕೆ ವಿಮಾನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಧಿಕಾರಿಗಳಿಂದ ತಪಾಸಣೆ

ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಆಗಮನ ಹಿನ್ನೆಲೆಯಲ್ಲಿ ಮಂಗಳವಾರ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿರೇ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿ ಆಡಳಿತ ಮಂಡಳಿಯ ಜತೆ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ಈ ಸಂದರ್ಭ ಮಂಗಳೂರು ಉಪವಿಭಾಗಧಿಕಾರಿ ಮದನ್‌ ಮೋಹನ್, ಮಂಗಳೂರು ನಗರ ಕಾನೂನು ಸುವ್ಯವಸ್ಥಾ ವಿಭಾಗದ ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್, ಸಂಚಾರ ಮತ್ತು ಅಪರಾಧ ವಿಭಾಗದ ಉಪಪೊಲೀಸ್ ಆಯುಕ್ತ ದಿನೇಶ್ ಕುಮಾರ್, ಸಂಚಾರ ಮತ್ತು ಅಪರಾಧ ವಿಭಾಗದ ಎಸಿಪಿ ನಟರಾಜ್, ಕೇಂದ್ರ ಉಪವಿಭಾಗದ ಎಸಿಪಿ ಪರಮೇಶ್ವರ್ ಅನಂತ್ ಹೆಗ್ಡೆ, ಉತ್ತರ ವಿಭಾಗ ಎಸಿಪಿ ಮಹೇಶ್ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಬುಧವಾರ ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಜೆ ವೇಳೆ ಕ್ಷೇತ್ರಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7ರಿಂದ ಎಂದಿನಂತೆ ದರುಶನಕ್ಕೆ ಅವಕಾಶ ನೀಡಲಾಗುವುದು. ಮುಖ್ಯಮಂತ್ರಿ ಆಗಮಿಸುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತರು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top