ಸಂಪಾಜೆ : ನೇಣು ಬಿಗಿದು ಯುವಕ ಆತ್ಮಹತ್ಯೆ
ಸಂಪಾಜೆ : ಗ್ರಾಮದ ಬಂಗ್ಲೆಗುಡ್ಡೆಯ ಲಿಖಿತ್ (22) ಎಂಬ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.
ಲಿಖಿತ್ ಅವರು ಮನೆಯಲ್ಲಿ ಯಾರು ಇಲ್ಲದ ಸಮಯನೋಡಿ ಮನೆಯ ಮಹಡಿಯ ಅಡ್ಡಕ್ಕೆ ನೇಣು ಹಾಕಿಕೊಂಡು ಅತ್ಮಹತ್ಯೆ ಯತ್ನಿಸಿದ್ದಾರೆ. ಕೂಡಲೇ ಮನೆಯವರು ಅವನನ್ನು ಕೆಳಗೆ ಇಳಿಸಿ ಸಂಪಾಜೆ ಆರೋಗ್ಯ ಕೇಂದ್ರಕ್ಕೆ ಕರೆತಂದು ಅಲ್ಲಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ತರುವ ವೇಳೆ ವೈದ್ಯರು ಮೃತ ಪಟ್ಟಿರುವುದಾಗಿ ತಿಳಿಸಿದರು. ಮೃತನು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.
Next Story