ಮಿತ್ತಬೈಲು ಜುಮಾ ಮಸೀದಿ ಮಾಜಿ ಅಧ್ಯಕ್ಷ ಎಸ್ ಕುಂಞಿಬಾವ ನಿಧನ
ಬಂಟ್ವಾಳ, ಅ.12: ಮಿತ್ತಬೈಲು ಮೊಹಿಯುದ್ದೀನ್ ಜುಮಾ ಮಸೀದಿ ಇದರ ಮಾಜಿ ಅಧ್ಯಕ್ಷ ಎಸ್.ಕುಂಞಿಬಾವ (80) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಸ್ವಗೃಹದಲ್ಲಿ ನಿಧನರಾದರು.
ಅವರು ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ, ಸದಸ್ಯರಾಗಿ ಹಾಗೂ ಜಮಾತಿನ ಹಲವಾರು ಸಂಘಸಂಸ್ಥೆಗಳ ಮಾರ್ಗದರ್ಶಕರಾಗಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಮೃತರು ಪತ್ನಿ, ಐವರು ಪುತ್ರರು, ಐವರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸಂತಾಪ: ಎಸ್ ಕುಂಞಿಬಾವ ರವರ ನಿಧನಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್, ಖಾದರ್, ಮಿತ್ತಬೈಲು ಜುಮಾ ಮಸೀದಿಯ ಆಡಳಿತ ಕಮಿಟಿಯ ಅಧ್ಯಕ್ಷ ಮೊಹಮ್ಮದ್ ಸಾಗರ್, ಕೋಶಾಧಿಕಾರಿ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ, ಮಾಜಿ ಅಧ್ಯಕ್ಷ ಹಬೀಬುಲ್ಲಾ, ಕಾರ್ಯದರ್ಶಿ ಮಹಮ್ಮದ್ ಅದ್ದೇಡಿ ಸಹಿತ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
Next Story