ದೃಶ್ಯ ಕಲಾ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ, ಅ.15: ಮೈಸೂರಿನಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಇಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ತರಗತಿಗಳ ಪ್ರವೇಶಕ್ಕೆ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.
ಬಿವಿಎ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ಕಲೆ, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಪದವಿಯಾಗಿದ್ದು, ನಂತರ ಎರಡು ವರ್ಷದ ಸ್ನಾತಕೋತ್ತರ ಪದವಿ ಸಹ ಇರುತ್ತದೆ. ಅ.18ರಂದು ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನ ವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ - https://www.mysore.nic.in, https://www.cavamysore.karnataka.gov.in- ಅಥವಾ ದೂ.ಸಂ: 0821-2438931ನ್ನು ಸಂಪರ್ಕಿಸುವಂತೆ ಚಾಮರಾಜೇಂದ್ರ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story