ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ
ಉಡುಪಿ, ಅ.16: ಪೋಲಿಸ್ ಕಾನ್ಸ್ಟೇಬಲ್(ಸಿವಿಲ್) (ಪುರುಷ ಮತ್ತು ಮಹಿಳೆ) (ಎನ್ಕೆಕೆ ಮತ್ತು ಕೆಕೆ)-3533 ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳನ್ನು ಅಕ್ಟೋಬರ್ 24ರಂದು ಅಪರಾಹ್ನ 12ರಿಂದ 1:30ರವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ.
ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಕರೆಪತ್ರವನ್ನು ಇಲಾಖೆಯ ವೆಬ್ಸೈಟ್ -www.recruitment.ksp.gov.in -ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೋಲಿಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
Next Story