ಕಾಸರಗೋಡು : ಮೂರು ತಿಂಗಳ ಮಗು ಸಹಿತ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ
ಕಾಸರಗೋಡು: ಮೂರು ತಿಂಗಳ ಮಗು ಸಹಿತ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ನೀಲೇಶ್ವರದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ನೀಲೇಶ್ವರ ಕಡಿಂಞಮೂಲೆಯ ರಮ್ಯಾ (31) ಮೃತರು ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಮಗು ಸಹಿತ ಅವರು ಬಾವಿಗೆ ಹಾರಿದ್ದರು ಎಂದು ತಿಳಿದುಬಂದಿದ್ದು, ಮನೆಯವರು ಹಾಗು ಸ್ಥಳೀಯರು ಅವರನ್ನು ಬಾವಿಯಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ ಇಬ್ಬರು ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಮಾನಸಿಕ ಖಿನ್ನತೆ ಕೃತ್ಯಕ್ಕೆ ಕಾರಣ ಎಂದು ದೂರಲಾಗಿದೆ. ಈ ಬಗ್ಗೆ ನೀಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story