ದ.ಕ. ಜಿಲ್ಲೆ : ಕೋವಿಡ್ಗೆ ಓರ್ವ ಬಲಿ; 24 ಮಂದಿಗೆ ಕೊರೋನ ಸೋಂಕು
ಮಂಗಳೂರು, ಅ.19: ದ.ಕ. ಜಿಲ್ಲೆಯಲ್ಲಿ ಕೋವಿಡ್ಗೆ ಓರ್ವ ಬಲಿಯಾಗಿದ್ದು, 24 ಮಂದಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ 37 ಮಂದಿ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ.0.32ರಷ್ಟು ದಾಖಲಾಗಿದೆ. ಜಿಲ್ಲೆಯಲ್ಲಿನ 1,15,132 ಸೋಂಕಿತರ ಪೈಕಿ 1,13,155 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್ಗೆ 1676 ಮಂದಿ ಮೃತಪಟ್ಟಿದ್ದಾರೆ. 301 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story