ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಗೆ ಚೂರಿ ಇರಿತ
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲದಲ್ಲಿ ಮಂಗಳವಾರ ನಡೆದಿದೆ.
ಚೂರಿ ಇರಿತಕ್ಕೊಳಗಾದವರನ್ನು ಕರಾಟೆ ಶಿಕ್ಷಕ ಉಳಿಯ ನಿವಾಸಿ ಹರೀಶ್ ಗಾಣಿಗ (42) ಎಂದು ಗುರುತಿಸಲಾಗಿದೆ.
ಉಳಿಯ ನಿವಾಸಿ ವಿಶಾಲ್ ಚೂರಿಯಿಂದ ಇರಿದ ಆರೋಪಿ ಎಂದು ತಿಳಿದುಬಂದಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ಹರೀಶ್ ಗಾಣಿಗ ಅವರ ಜೊತೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ವಿಶಾಲ್ ಗಲಾಟೆ ಮಾಡಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಹರೀಶ್ ಅವರು ವಿಶಾಲ್ ವಿರುದ್ಧ ಠಾಣೆಗೆ ದೂರು ನೀಡಿದ್ದರು.
ಈ ಕಾರಣದಿಂದ ಕೋಪಗೊಂಡ ವಿಶಾಲ್ ಹರೀಶ್ ಅವರ ಅಂಗಡಿ ಬಳಿ ತೆರಳಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ವೇಳೆ ಚೂರಿಯಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಹರೀಶ್ ಗಾಣಿಗ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Next Story