ಉಡುಪಿ: ಗುರುವಾರ 9 ಮಂದಿಗೆ ಕೊರೋನ ಪಾಸಿಟಿವ್
ಸಾಂದರ್ಭಿಕ ಚಿತ್ರ (PTI)
ಉಡುಪಿ: ಜಿಲ್ಲೆಯಲ್ಲಿ ಗುರುವಾರ ಕೋವಿಡ್-19 ಸೋಂಕಿಗೆ 9 ಮಂದಿ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಎಂಟು ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 54 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ. ದಿನದಲ್ಲಿ ಸೋಂಕು ದೃಢಪಟ್ಟ 9ಮಂದಿಯಲ್ಲಿ ಐವರು ಪುರುಷರು ಹಾಗೂ ನಾಲ್ವರು ಮಹಿಳೆಯರು. ಇವರಲ್ಲಿ ಆರು ಮಂದಿ ಉಡುಪಿ ತಾಲೂಕಿನವರಾದರೆ ಇಬ್ಬರು ಕುಂದಾಪುರ ಹಾಗೂ ಒಬ್ಬರು ಕಾರ್ಕಳದವರು. ಪಾಸಿಟಿವ್ ಬಂದವರಲ್ಲಿ ಒಬ್ಬರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಉಳಿದ ಎಂಟು ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗುರುವಾರ 8 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,095ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2383 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,625ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11,94,795 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.
ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,625ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11,94,795 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
2465 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 2465 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 314 ಮಂದಿ ಮೊದಲ ಡೋಸ್ ಹಾಗೂ2151 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 219 ಮಂದಿ ಮೊದಲ ಡೋಸ್ ಹಾಗೂ 1304 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 95 ಮಂದಿ ಮೊದಲ ಡೋಸ್ ಹಾಗೂ 839 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಒಬ್ಬರು ಆರೋಗ್ಯ ಕಾರ್ಯಕರ್ತರು, 7 ಮಂದಿ ಮುಂಚೂಣಿ ಕಾರ್ಯಕರ್ತರೂ ಸಹ ಇಂದು ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ. ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 219 ಮಂದಿ ಮೊದಲ ಡೋಸ್ ಹಾಗೂ 1304 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 95 ಮಂದಿ ಮೊದಲ ಡೋಸ್ ಹಾಗೂ 839 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಒಬ್ಬರು ಆರೋಗ್ಯ ಕಾರ್ಯಕರ್ತರು, 7 ಮಂದಿ ಮುಂಚೂಣಿ ಕಾರ್ಯಕರ್ತರೂ ಸಹ ಇಂದು ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 9,07,769 ಮಂದಿ ಮೊದಲ ಡೋಸ್ ಹಾಗೂ 4,69,195 ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.