ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ಸೇವೆಗೆ ಬನ್ನಿ: ಉಡುಪಿ ಜಿಲ್ಲಾಧಿಕಾರಿ | Vartha Bharati- ವಾರ್ತಾ ಭಾರತಿ

--

ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ಸೇವೆಗೆ ಬನ್ನಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಅ.22: ಜಿಲ್ಲೆಯ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ಸೇವೆಗೆ ಸೇರ್ಪಡೆಗೊಳ್ಳಬೇಕು. ಈ ಮೂಲಕ ಸಮಾಜದಲ್ಲಿ ತಮ್ಮ ಚಿಂತನೆಯ ಬದಲಾವಣೆಯನ್ನು ತರಬಹುದು ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯದ ಸಹಯೋಗದಲ್ಲಿ ಶುಕ್ರವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ ‘ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ’ ಕುರಿತ ವಿಶೇಷ ಕಾರ್ಯಾಗಾರವನ್ನು ಉದ್ಘಾಟಿಸಿ ಜಿಲ್ಲಾಧಿಕಾರಿಗಳು ಮಾತನಾಡುತಿದ್ದರು.

ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ತರಬೇತಿ ಕಾರ್ಯಾಗಾರವನ್ನು ಆಫ್‌ಲೈನ್ ಮತ್ತು ಆನ್‌ಲೈನ್ ಎರಡೂ ಮಾದರಿಯಲ್ಲಿ ನಡೆಸುವ ಚಿಂತನೆ ಇದ್ದು, ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮೊದಲು ತಮ್ಮ ಬಗ್ಗೆ ತಾವೇ ಅರಿತಿರಬೇಕು. ಆಸಕ್ತಿ ಇರುವ ಕ್ಷೇತ್ರಗಳ ಬಗ್ಗೆ ತಿಳಿದಿರಬೇಕು. ಸಾಧನೆಯ ಹಾದಿಯಲ್ಲಿ ವೈಫಲ್ಯಗಳು ಎದುರಾದರೂ ಮುನ್ನೆಡೆದು ಗುರಿ ಸಾಧಿಸಬೇಕು. ಶ್ರಮ ಪಟ್ಟರೆ ಸ್ಪರ್ದಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಎಂದು ಕೂರ್ಮರಾವ್ ಹೇಳಿದರು.

ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಒಟ್ಟು ಜನಸಂಖ್ಯೆಯಲ್ಲಿ ಶೇ.1ರಷ್ಟು ಮಂದಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಪರೀಕ್ಷೆ ಬರೆಯಲು ಮುಂದಾಗುತ್ತಿದ್ದಾರೆ. ಆಡಳಿತ ಸರಿ ಇಲ್ಲ ಎನ್ನುವ ಯುವಕರೇ ನಾಗರಿಕ ಸೇವೆಗೆ ಬಂದು ಸರಿಪಡಿಸುವ ಪ್ರಯತ್ನಕ್ಕೆ ಮುಂದಾಗಬೇಕು. ಸುಶಿಕ್ಷಿತರ ಜಿಲ್ಲೆಯಾದ ಉಡುಪಿಯಲ್ಲಿ ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಯತ್ತ ಒಲವು ತೋರಿಸುವವರ ಸಂಖ್ಯೆ ತುಂಬ ವಿರಳ. ಬಿಹಾರ ಹಾಗೂ ಉತ್ತರ ಪ್ರದೇಶದಲ್ಲಿ ಯುಪಿಎಸ್‌ಸಿ ಪರೀಕ್ಷೆಗೆ ಒಂದು ಪ್ರದೇಶದಲ್ಲಿ ಕನಿಷ್ಠವೆಂದರೂ 10 ಅಭ್ಯರ್ಥಿಗಳು ತಯಾರಿ ನಡೆಸುತ್ತಾರೆ ಎಂದರು.

ಯುಪಿಎಸ್‌ಸಿ ರ್ಯಾಂಕ್ ಆಧಾರದ ಮೇಲೆ ಒಟ್ಟು 19 ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಸ್ಥಳೀಯ ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದವರೆಗಿನ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಬಹುದಾಗಿದೆ. ವ್ಯವಸ್ಥೆಯನ್ನು ಬದಲಿಸಬೇಕು ಎನ್ನುವ ಹಂಬಲವಿರುವ ಯುವಜನರು ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ನಡೆಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾತನಾಡಿದರು. ದ.ಕ. ಪ್ರೋಬೆಷನರಿ ಐಎಎಸ್ ಅಧಿಕಾರಿ ಎನ್.ಎಂ.ಎ.ಅಕ್ರಂ ಶಾ, ಕುದುರೆಮುಖ ವನ್ಯ ಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಅಜಿತ್ ಪಾಟೀಲ್ ತಮ್ಮ ಸಾಧನೆಯ ಹಾದಿಯ ಬಗ್ಗೆ ವಿವರಿಸಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಉಡುಪಿ ಕೆಎಂಎಸ್ ಅಕ್ಷತಾ, ಜಿ.ಪಂ. ಯೋಜನಾಧಿಕಾರಿ ಬಾಬು ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ಡಾ.ರೋಶನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ನೆಹರೂ ಯುವ ಕೇಂದ್ರದ ವಿಲ್ಪ್ರೆಡ್ ಡಿ’ಸೋಜಾ ಸ್ವಾಗತಿಸಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top