ಉಡುಪಿ: 14 ಮಂದಿಗೆ ಕೋವಿಡ್ ಪಾಸಿಟಿವ್
ಉಡುಪಿ, ಅ. 22: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 14 ಮಂದಿ ಕೋವಿಡ್-19 ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಆರು ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 62ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ. ದಿನದಲ್ಲಿ ಸೋಂಕು ದೃಢಪಟ್ಟ 14 ಮಂದಿಯಲ್ಲಿ 9 ಮಂದಿ ಪುರುಷರು ಹಾಗೂ ಐವರು ಮಹಿಳೆಯರು. ಇವರಲ್ಲಿ ಆರು ಮಂದಿ ಉಡುಪಿ ತಾಲೂಕಿನವರಾದರೆ ಮೂವರು ಕುಂದಾಪುರ ಹಾಗೂ ನಾಲ್ವರು ಕಾರ್ಕಳದವರು. ಒಬ್ಬರು ಹೊರಜಿಲ್ಲೆಯವರು. ಪಾಸಿಟಿವ್ ಬಂದವರಲ್ಲಿ ನಾಲ್ವರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಉಳಿದ 10 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರ 6 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,101ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 1926 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,639ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11,96,721 ಮಂದಿಯನ್ನು ಕೆವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.
10,781 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 10,781 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 1180 ಮಂದಿ ಮೊದಲ ಡೋಸ್ ಹಾಗೂ 9601 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 826 ಮಂದಿ ಮೊದಲ ಡೋಸ್ ಹಾಗೂ 5382 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 354 ಮಂದಿ ಮೊದಲ ಡೋಸ್ ಹಾಗೂ 4176 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. 15 ಮಂದಿ ಆರೋಗ್ಯ ಕಾರ್ಯಕರ್ತರು, 28 ಮಂದಿ ಮುಂಚೂಣಿ ಕಾರ್ಯಕರ್ತರೂ ಸಹ ಇಂದು ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 9,08,949 ಮಂದಿ ಮೊದಲ ಡೋಸ್ ಹಾಗೂ 4,78,796 ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.