ಮುಲ್ಕಿ: ರೈಲು ಢಿಕ್ಕಿ ಹೊಡೆದು ಮಹಿಳೆಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
ಮುಲ್ಕಿ: ರೈಲು ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ರೈಲು ನಿಲ್ದಾಣದ ಬಳಿ ಶನಿವಾರ ನಡೆದಿದೆ.
ಮೇಸ್ತ್ರಿ ಇಬ್ರಾಹೀಂ ಎಂಬವರ ಮಗಳು ಸಕೀನಾ ಗಾಯಗೊಂಡವರು ಎಂದು ತಿಳಿದು ಬಂದಿದೆ.
ಘಟನೆ ಇಂದು ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ ನಡೆದಿದ್ದು, ಗಂಭೀರ ಗಾಯಗೊಂಡ ಸಕೀನಾ ಅವರನ್ನು ಸ್ಥಳೀಯರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಿಂದ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ರೈಲ್ವೆ ಇಲಾಖೆಯ ಪೊಲೀಸರು ಹಾಗೂ ಮುಲ್ಕಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story