ಉಡುಪಿ ಜಿಲ್ಲೆಯಲ್ಲಿ 9 ಮಂದಿ ಕೋವಿಡ್ಗೆ ಪಾಸಿಟಿವ್
ಉಡುಪಿ, ಅ.26: ಜಿಲ್ಲೆಯಲ್ಲಿ ಮಂಗಳವಾರ 9 ಮಂದಿ ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 14 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 51ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಸೋಂಕು ದೃಢಪಟ್ಟ 9 ಮಂದಿಯಲ್ಲಿ ಏಳು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು. ಇವರಲ್ಲಿ ಎಂಟು ಮಂದಿ ಉಡುಪಿ ತಾಲೂಕು ಹಾಗೂ ಒಬ್ಬರು ಕಾರ್ಕಳ ತಾಲೂಕಿಗೆ ಸೇರಿದವರು. ಪಾಸಿಟಿವ್ ಬಂದ ಐವರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ನಾಲ್ವರಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ.
ಮಂಗಳವಾರ 14 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,141ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 1194 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,668ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 12,05,763 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.
3285 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 3285 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 322 ಮಂದಿ ಮೊದಲ ಡೋಸ್ ಹಾಗೂ 2963 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 245 ಮಂದಿ ಮೊದಲ ಡೋಸ್ ಹಾಗೂ 2206 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 77 ಮಂದಿ ಮೊದಲ ಡೋಸ್ ಹಾಗೂ 757 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.