ಗಾಂಜಾ ಸೇವನೆ ಆರೋಪ: ಯುವಕನ ಸೆರೆ
ಮಂಗಳೂರು, ಅ.26: ನಗರದ ಕಾಂಪ್ಲೆಕ್ಸ್ ಒಂದರಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದಡಿ ಯುವಕನನ್ನು ಬರ್ಕೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಪ್ರಥಮೇಶ ಎಂ. (20) ಬಂಧಿತ ಆರೋಪಿಯಾಗಿದ್ದಾನೆ. ಸ್ಥಳೀಯರ ಮಾಹಿತಿಯಂತೆ ಬರ್ಕೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಿಚಾರಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿಕೊಂಡಿರುವುದು ಕಂಡುಬಂದಿತು. ತಕ್ಷಣ ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಅದರಂತೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story