ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು : ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ನ ಸಹಯೋಗದಲ್ಲಿ 2021-22ನೇ ಸಾಲಿನ ಎರಡು ವರ್ಷದ ಬ್ಯಾಟರಿ ಎಲೆಕ್ಟ್ರಿಕಲ್ ವೆಹಿಕಲ್ ಹಾಗೂ ಒಂದು ವರ್ಷದ ಇಂಡಸ್ಟ್ರಿಯಲ್ ರೋಬೋಟಿಕ್ ಮತ್ತು ಡಿಜಿಟಲ್ ಮ್ಯಾನಿಫ್ಯಾಕ್ಚರಿಂಗ್ ಕೋರ್ಸ್ ತರಬೇತಿಗೆ ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರವೇಶ ಬಯಸುವ ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ನೇರವಾಗಿ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅ.30ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಂಸ್ಥೆಗೆ ಭೇಟಿ ನೀಡಬಹುದು ಅಥವಾ ದೂ.ಸಂ:08242216360/ ಮೊ.ಸಂ: 9845226485 ಸಂಪರ್ಕಿಸಬಹುದು ಎಂದು ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story