ಸುಳ್ಯ : ಕಟ್ಟಡದಿಂದ ಬಿದ್ದು ಯುವಕ ಮೃತ್ಯು
ಸುಳ್ಯ: ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬಾಳಿಲ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.
ಬಾಳಿಲದಲ್ಲಿ ಗಿರಿಜನ ಆಶ್ರಮ ಶಾಲೆಗೆ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು ಅದರ ಕೆಲಸಕ್ಕೆಂದು ಬಂದಿದ್ದ ಮದ್ಯಪ್ರದೇಶದ ಮಹೇಶ್ ಸಿಂಗ್ (20) ಕಟ್ಟಡದ ಕೆಲಸ ಮಾಡುವ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story