ಮಣಿಪಾಲ: ಬಿವಿಟಿ: ಉಚಿತ ವಸ್ತ್ರವಿನ್ಯಾಸ ತರಬೇತಿಗೆ ಅರ್ಜಿ ಆಹ್ವಾನ
ಮಣಿಪಾಲ, ನ.12: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ನ.21ರಿಂದ 4 ವಾರಗಳ ಉಚಿತ ವಸ್ತ್ರವಿನ್ಯಾಸ ತರಬೇತಿಯನ್ನು ಹಮ್ಮಿ ಕೊಳ್ಳಲಾಗಿದೆ. ಸ್ವಉದ್ಯೋಗ ಮಾಡಲು ಆಸಕ್ತಿ ಇರುವ ಮಹಿಳೆಯರು / ವಿದ್ಯಾಭ್ಯಾಸ ಮುಗಿಸಿರುವ ಅಭ್ಯರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು. ತರಬೇತಿಯ ಸಮಯದಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ ಇದೆ.
ಆಸಕ್ತ ಶಿಬಿರಾರ್ಥಿಗಳು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ನ.23ರೊಳಗೆ ಭಾರತೀಯ ವಿಕಾಸ ಟ್ರಸ್ಟ್, ಅನಂತ, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ, ಉಡುಪಿ - 576102, ಈ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿಕೊಡಬಹುದು. ಅಥವಾ ದೂರವಾಣಿ ನಂಬ್ರ (0820) 2570263ನ್ನು ಸಂಪರ್ಕಿಸುವ ಮೂಲಕ ತಮ್ಮ ಭಾಗವಹಿಸುವಿಕೆಯನ್ನು ದೃಢೀಕರಿಸಬಹುದು ಎಂದು ಬಿವಿಟಿಯ ಪ್ರಕಟಣೆ ತಿಳಿಸಿದೆ.
Next Story