ನ.19ರಂದು ಜನಸ್ವರಾಜ್ ಸಮಾವೇಶ
ಉಡುಪಿ, ನ.14: ರಾಜ್ಯ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಜನಸ್ವರಾಜ್ ಸಮಾವೇಶವು ನ.19 ಬೆಳಗ್ಗೆ 10.30ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಡೆಯಲಿರುವ ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ಸಚಿವ ಸುನಿಲ್ ವಿ. ಕುಮಾರ್ ಸಹಿತ ಇನ್ನಿತರ ಸಚಿವ ಗಣ್ಯರು, ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story