ಗಂಜಿಮಠ ನಾರಾಯಣ ಪೂಜಾರಿ ನಿಧನ
ಗುರುಪುರ: ಹಿರಿಯ ಕಾಂಗ್ರೆಸ್ ಮುಖಂಡ, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿ ಅವರು ನಿನ್ನೆ ರಾತ್ರಿ ನಿಧನ ಹೊಂದಿರುತ್ತಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಅವರು ಪತ್ನಿ ಮತ್ತು ಕಾಂಗ್ರೆಸ್ ನಾಯಕ ಗಣೇಶ್ ಪೂಜಾರಿ ಸಹಿತ 4 ಗಂಡು ಮತ್ತು 2 ಹೆಣ್ಣು ಮಕ್ಕಳನ್ನು ಅಗಲಿರುತ್ತಾರೆ. ಅವರು ಗಂಜಿಮಠ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮತ್ತು ಸುಮಾರು 30 ವರ್ಷಗಳ ಕಾಲ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ದ. ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಸುಮಾರು 15 ವರ್ಷ ಸೇವೆ ಸಲ್ಲಿಸಿರುತ್ತಾರೆ. ಅದಲ್ಲದೇ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾಗಿ ಕೂಡ ಕೆಲಸ ಮಾಡಿರುತ್ತಾರೆ.
ಅವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ, ವೀರಪ್ಪ ಮೊಯಿಲಿ, ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್, ರಮಾನಾಥ್ ರೈ, ವಿನಯ ಕುಮಾರ್ ಸೊರಕೆ ಅವರ ನಿಕಟವರ್ತಿಯಾಗಿದ್ದರು. ನಾರಾಯಣ ಪೂಜಾರಿ ನಿಧನಕ್ಕೆ ಮಾಜಿ ಸಚಿವ ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story