ಭಟ್ಕಳ: ತನ್ನನ್ನು ಕಚ್ಚಿದ ಹೆಬ್ಬಾವನ್ನೇ ಹೊತ್ತುಕೊಂಡು ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ವ್ಯಕ್ತಿ !
ಭಟ್ಕಳ: ಹೆಬ್ಬಾವು ಕಚ್ಚಿದರೂ ವಿಚಲಿತನಾಗದೆ ಹೆಬ್ಬಾವು ಹೊತ್ತುಕೊಂಡೇ ಆಸ್ಪತ್ರೆಗೆ ಚಿಕಿತ್ಸೆ ದಾಖಲಾಗಿರುವ ಆಶ್ಚರ್ಯಕರ ಘಟನೆಯೊಂದು ಸೋಮವಾರ ರಾತ್ರಿ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಹೆಬ್ಬಾವು ಕಚ್ಚಿ ಗಾಯಗೊಂಡ ವ್ಯಕ್ತಿಯನ್ನು ಮಣ್ಕುಳಿ ಸೀತಾರಾಮ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ.
ರೈಲ್ವೆ ನಿಲ್ದಾಣ ರಸ್ತೆ ಬಳಿಯಿದ್ದ ಹೆಬ್ಬಾವನ್ನು ಮಣ್ಕುಳಿ ಸೀತಾರಾಮ ನಾಯ್ಕ ಅವರು ತನ್ನ ಕೆಲವು ಸ್ನೇಹಿತರ ಸಹಾಯದಿಂದ ಸೆರೆಹಿಡಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಅವರಿಗೆ ಹಾವು ಕಚ್ಚಿದೆ. ಹೆಬ್ಬಾವಿನಿಂದ ಕಚ್ಚಿಸಿಕೊಂಡ ಇವರು ವಿಚಲಿತಗೊಳ್ಳದೆ, ಆರೇಳು ಅಡಿ ಉದ್ದದ ಹೆಬ್ಬಾವವನ್ನು ತಮ್ಮ ಸ್ನೇಹಿತರ ಸಹಾಯದೊಂದಿಗೆ ಹಿಡಿದುಕೊಂಡೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ಬಂದು ಹಾವನ್ನು ಹಿಡಿದುಕೊಂಡು, ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದರು ಎಂದು ತಿಳಿದು ಬಂದಿದೆ.
ಸೀತಾರಾಮ ಅವರಿಗೆ ಭಟ್ಕಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.
Next Story