ಮಾಣಿ; ಕಾರು ಢಿಕ್ಕಿ: ಬಾಲಕನಿಗೆ ಗಾಯ
ಬಂಟ್ವಾಳ, ನ.27: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ಶನಿವಾರ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಮಾಣಿ ಕರ್ನಾಟಕ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ, ಕೊಡಾಜೆ ನಿವಾಸಿ ಭರತ್ ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ. ಈತ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.
Next Story