ಉಡುಪಿ : 7 ಮಂದಿ ಕೋವಿಡ್ಗೆ ಪಾಸಿಟಿವ್
ಉಡುಪಿ, ನ.29: ಜಿಲ್ಲೆಯಲ್ಲಿ ಸೋಮವಾರ ಏಳು ಮಂದಿ ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಇಂದು ಐವರು ಕೋವಿಡ್ ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರೆ, 57 ಮಂದಿ ಇನ್ನೂ ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಒಬ್ಬ ಪುರುಷ ಹಾಗೂ ಆರು ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ ನಾಲ್ವರು ಉಡುಪಿ, ಇಬ್ಬರು ಕುಂದಾಪುರ ಹಾಗೂ ಒಬ್ಬರು ಕಾರ್ಕಳ ತಾಲೂಕಿನವರು. ಪಾಸಿಟಿವ್ ಬಂದ ಇಬ್ಬರನ್ನು ಕೋವಿಡ್ ಆಸ್ಪತ್ರೆಗೆ ಹಾಗೂ ಉಳಿದ ಐವರನ್ನು ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತತ 42ನೇ ದಿನವಾದ ಇಂದು ಸಹ ಜಿಲ್ಲೆಯಲ್ಲಿ ಕೊರೋನ ದಿಂದ ಯಾರೂ ಮೃತಪಟ್ಟಿಲ್ಲ.

ರವಿವಾರ ಸೋಂಕಿನಿಂದ ಐವರು ಗುಣಮುಖರಾಗಿದ್ದು, ಈವರೆಗೆ ಕೊರೋನ ದಿಂದ ಚೇತರಿಸಿಕೊಂಡವರ ಸಂಖ್ಯೆ 76,345ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 716 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,878ಕ್ಕೇರಿದೆ.
12,880 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಸೋಮವಾರ ಒಟ್ಟು 12,880 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 1622 ಮಂದಿ ಮೊದಲ ಡೋಸ್ ಹಾಗೂ 11,258 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 1064 ಮಂದಿ ಮೊದಲ ಡೋಸ್ ಹಾಗೂ 8338 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 558 ಮಂದಿ ಮೊದಲ ಡೋಸ್ ಹಾಗೂ 2906 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ಆರು ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ ಎಂಟು ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.