ದ.ಕ.ಜಿಲ್ಲೆಯಲ್ಲಿ 11 ಮಂದಿಗೆ ಕೋವಿಡ್ ಪಾಸಿಟಿವ್
ಮಂಗಳೂರು, ನ.29: ದ.ಕ.ಜಿಲ್ಲೆಯಲ್ಲಿ ಸೋಮವಾರ 11 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 11 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.25 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 22,40,213 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 21,24,351 ನೆಗೆಟವ್ ಮತ್ತು 1,15,862 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,032 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1694 ಮಂದಿ ಈವರೆಗೆ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 136 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 88,904 ಪ್ರಕರಣ ದಾಖಲಿಸಿ, 1,07,83,270 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story