ಉಡುಪಿ: ಏಳು ಮಂದಿಗೆ ಕೊರೋನ ಸೋಂಕು
ಉಡುಪಿ, ನ.30: ಜಿಲ್ಲೆಯಲ್ಲಿ ಮಂಗಳವಾರ ಏಳು ಮಂದಿಯಲ್ಲಿ ಕೊರೋನ ಸೋಂಕು ಪಾಸಿಟಿವ್ ಬಂದಿದ್ದು, ಇಂದು ಆರು ಮಂದಿ ಕೋವಿಡ್ ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. 58 ಮಂದಿ ಇನ್ನು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಎಚ್ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಸೋಂಕಿತರ ಪೈಕಿ ನಾಲ್ವರು ಉಡುಪಿ, ಮೂವರು ಕುಂದಾಪುರ ತಾಲೂಕಿನ ವರು. ಪಾಟಿಸಿಟಿವ್ ಬಂದ ಏಳು ಮಂದಿ ಕೂಡ ಹೋಮ್ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76885ಕ್ಕೇರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 76351 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 10937 ಮಂದಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 1543 ಮಂದಿ ಮೊದಲ ಡೋಸ್ ಹಾಗೂ 9394 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story