ವಿಶ್ವ ಏಡ್ಸ್ ನಿಯಂತ್ರಣ ದಿನದ ಅಂಗವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ನಿಂದ ಆಶ್ರಮಕ್ಕೆ ಭೇಟಿ
ಮಂಗಳೂರು, ಡಿ.1: ವಿಶ್ವ ಏಡ್ಸ್ ನಿಯಂತ್ರಣ ದಿನದ ಅಂಗವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ನಗರದ ಬಿಜೈ ಕಾಪಿಕಾಡ್ನಲ್ಲಿರುವ ಸ್ನೇಹ ದೀಪ ಆಶ್ರಮಕ್ಕೆ ಬುಧವಾರ ಭೇಟಿ ನೀಡಿ ಆಹಾರ ಕಿಟ್, ಚಾಕ್ಲೆಟ್ ಹಾಗೂ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಅಲ್ಲದೆ ಆಶ್ರಮದ ಮುಖ್ಯಸ್ಥೆ ತಬಸ್ಸುಮ್ ಜೊತೆ ಮಕ್ಕಳ ಕುರಿತು ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭ ವಿಮ್ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ, ಉಪಾಧ್ಯಕ್ಷೆ ಮರಿಯಮ್ಮ, ಕಾರ್ಪೊರೇಟರ್ ಸಂಶಾದ್ ಅಬೂಬಕರ್ ಉಪಸ್ಥಿತರಿದ್ದರು.
Next Story