ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಕೋವಿಡ್ ಲಸಿಕಾ ಶಿಬಿರ
ಉಡುಪಿ, ಡಿ.5: ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಪ್ರಥಮ ಮತ್ತು ದ್ವಿತೀಯ ಕೋವಿಡ್ ಲಸಿಕಾ ಶಿಬಿರವನ್ನು ಉಡುಪಿಯ ಜಾಮೀಯ ಮಸೀದಿಯ ಕೆಳ ಅಂತಸ್ತಿನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಸುಮಾರು 378 ಮಂದಿ ಸ್ತ್ರೀ ಹಾಗೂ ಪುರುಷರು ಈ ಶಿಬಿರದಲ್ಲಿ ಭಾಗವಹಿಸಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಕಲ್ಯಾಣಪುರ್ ಗಫೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story