ಉಡುಪಿ: ಐವರಲ್ಲಿ ಕೋವಿಡ್ ಸೋಂಕು ಪತ್ತೆ
ಉಡುಪಿ, ಡಿ.5: ಜಿಲ್ಲೆಯಲ್ಲಿ ರವಿವಾರ ಐವರು ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಇಂದು ಕೇವಲ ಮೂವರು ಕೋವಿಡ್ನಿಂದ ಚೇತರಿಸಿ ಕೊಂಡಿದ್ದರೆ, ಒಟ್ಟು 78 ಮಂದಿ ಇನ್ನೂ ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ ಮೂವರು ಉಡುಪಿ ಹಾಗೂ ಇಬ್ಬರು ಕುಂದಾಪುರ ತಾಲೂಕಿನವರು. ಪಾಸಿಟಿವ್ ಬಂದ ಇಬ್ಬರನ್ನು ಕೋವಿಡ್ ಕೇರ್ ಸೆಂಟರ್ಗೆ ಹಾಗೂ ಮೂವರನ್ನು ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶನಿವಾರ ಸೋಂಕಿನಿಂದ ಮೂವರು ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,381ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4403 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,936ಕ್ಕೇರಿದೆ.
2555 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ರವಿವಾರ ಒಟ್ಟು 2555 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 564 ಮಂದಿ ಮೊದಲ ಡೋಸ್ ಹಾಗೂ 1991 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 404 ಮಂದಿ ಮೊದಲ ಡೋಸ್ ಹಾಗೂ 1457 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 160 ಮಂದಿ ಮೊದಲ ಡೋಸ್ ಹಾಗೂ 529 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ಒಬ್ಬ ಆರೋಗ್ಯ ಕಾರ್ಯಕರ್ತ ಹಾಗೂ ನಾಲ್ವರು ಮುಂಚೂಣಿ ಕಾರ್ಯಕರ್ತರು ಸಹ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.